
ಒಬ್ಬ ಅದ್ಭುತ ಮಾತುಗಾರನ ಅದ್ಭುತವಾದ ಮಾತುಗಳನ್ನು ಕೇಳ್ತಿದ್ದೆ. ಆತ ಹೇಳ್ತಾನೆ ”ನಮ್ಮೊಳಗೊಬ್ಬ ಸಲಹೆಗಾರ, ನಮ್ಮ ಹಿತೈಷಿ ಇರ್ತಾನೆ. ಆತ ಯಾವಾಗ್ಲೂ ನೋಡು, ಇದು ಕೆಟ್ಟದು ಹೀಗ್ ಮಾಡ್ಬೇಡ, ಅಂತ ನಾವು ತಪ್ಪು ದಾರಿ ತುಳಿಯುವಾಗ ಎಚ್ಚರಿಸ್ತಾ ಇರ್ತಾನೆ. ಆದ್ರೆ ನಾವೇನ್ ಮಾಡ್ತೇವೆ ಅಂದ್ರೆ ಅವ್ನ ತಲೆ ಮೇಲ್ ಪಟ್ ಅಂತ ಹೊಡ್ದು ಸುಮ್ನಿರು, ಪಕ್ಕದವ್ನ್ ಮಾಡ್ತಾನೆ, ನನ್ ಫ್ರೆಂಡ್ ಮಾಡ್ತಾನೆ ನಾನ್ಯಾಕೆ ಹೀಗ್ ಮಾಡ್ಬಾರ್ದು? ಅಂತ ಅವ್ನ ಮಾತನ್ನು ಕಡೆಗಣಿಸಿ ಮೂಲೆಗ್ ತಳ್ತೇವೆ. ಅವ್ನು ಒಂದು ನಾಲ್ಕೈದು ಬಾರಿ ಆ ರೀತಿ ಹೇಳ್ತಾನೆ. ಪ್ರತಿ ಬಾರಿಯೂ ಅವ್ನ್ ತಲೆ ಮೇಲ್ ಹೊಡ್ದು ಸುಮ್ನೆ ಕೂತ್ಕೊಳಿಸ್ತೇವೆ. ಆಮೇಲೆ ಅವ್ನು ನಮ್ ಜೊತೆ ಮಾತಡೋದೇ ಬಿಟ್‌ಬಿಡ್ತಾನೆ. ಅವ್ನೇ ಆತ್ಮ. ಆತ ಪೂರ್ತಿಯಾಗಿ ಸತ್ತೋಗ್ತಾನೆ. ಆಮೇಲೆ ನಮ್ಮನ್ನು ಹೇಳೋರ್ ಕೇಳೋರ್ ಇರೋದೇ ಇಲ್ಲ. ಬೇಕಾ ಬಿಟ್ಟಿ ಮನಸ್ಸು ಎಲ್ಲೆಲ್ಲೋ ಹರಿ ಬಿಡ್ತೇವೆ. ಮುಟ್ಬೇಕಾದ ಗುರಿಯನ್ನ ಮುಟ್ಟೋದಕ್ಕೆ ಸಾಧ್ಯಾನೇ ಆಗೋದಿಲ್ಲ. ಗೆಳೆಯರೇ ಆತ್ಮ ಶಕ್ತಿಯನ್ನ ಕಳಕೊಂಡ ಮನುಷ್ಯ ಬದುಕಿದ್ದು ಸತ್ ಹಾಗೆ. ” ಅಂತ.